
ಮಂಗಳೂರು ನಗರದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಕುಚ್ಚಲಕ್ಕಿ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರು ಹೆಚ್ಚಾಗಿ ಕುಚ್ಚಲಕ್ಕಿ ಯನ್ನೇ ಬಳಸುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಕುಚ್ಚಲಕ್ಕಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ. ಈ ಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕುಚ್ಚಲಕ್ಕಿಯನ್ನೇ ಬಳಸುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಅದನ್ನೇ ವಿತರಿಸುವಂತೆ ಕೋರಿದ್ದೇನೆ ಎಂದಿದ್ದಾರೆ.
ಈ ಬಗ್ಗೆ ಸಚಿವರು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಕುಚ್ಚಲಕ್ಕಿ ವಿತರಿಸುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
Comments are closed.