
ಮಂಗಳೂರು, ಮೇ 30 : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಥಮ ಕಂತಿನಲ್ಲಿ ಇಂದು 300 ಆಕ್ಸಿಜೆನ್ ಕಾನ್ಸಂಟ್ರೇಟರ್‍ಗಳು, 20 ವೆಂಟಿಲೇಟರ್‍ಗಳು ಮತ್ತು ಹೈ-ಪೋಲಿಯಂತ್ರ ಗಳನ್ನು ಒದಗಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಸ್ವೀಕರಿಸಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಿ.ಇ.ಒ ಡಾ.ಹೆಚ್.ಎಲ್. ಮಂಜುನಾಥ್, ಪ್ರಾದೇಶಿಕ ನಿರ್ದೇಶಕ ಶೀನಪ್ಪ.ಎಂ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಮಸ್ವಾಮಿ, ನೆಲಮಂಗಲ ತಾಲೂಕು ವೈದ್ಯಾಧಿಕಾರಿ ಡಾ. ಹರೀಶ್ ಕುಮಾರ್ ಉಪಸ್ಥಿತರಿದ್ದರು.
Comments are closed.