ಕರಾವಳಿ

ಉಡುಪಿ ಜಿಲ್ಲೆಯ ಈ 35 ಗ್ರಾಮಪಂಚಾಯತಿಗಳು ಜೂ.2ರಿಂದ ಸಂಪೂರ್ಣ ಲಾಕ್ಡೌನ್: ಇಲ್ಲಿದೆ ವಿವರ

Pinterest LinkedIn Tumblr

ಉಡುಪಿ: ಕೋವಿಡ್ ಹರಡುವಿಕೆ, ಪಾಸಿಟಿವ್ ಪ್ರಕರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 50 ಕ್ಕೂ ಸಕ್ರಿಯ ಪ್ರಕರಣಗಳಿರುವ ಗ್ರಾಮ ಪಂಚಾಯತ್ ಗಳನ್ನು ಬುಧವಾರದಿಂದ ಭಾನುವಾರದವರೆಗೆ 5 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮಾಡುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಪ್ರಸ್ತುತ 35 ಗ್ರಾಮ ಪಂಚಾಯತ್ ಗಳಲ್ಲಿ ಬುಧವಾರದಿಂದ ಕಂಪ್ಲೀಟ್ ಲಾಕ್ಡೌನ್ ಆದೇಶ ನೀಡಿದೆ.

ಸಂಪೂರ್ಣ ಲಾಕ್ಡೌನ್ ಆಗಲಿರುವ ಗ್ರಾ.ಪಂ….
ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ.

ಈ ಗ್ರಾಮಪಂಚಾಯತ್ ವ್ಯಾಪ್ತಿ ಜನರಿಗೆ ನಾಳೆ (ಜೂ.1 ಮಂಗಳವಾರ) ಅಗತ್ಯ ವಸ್ತು ಖರೀದಿಗೆ ಅವಕಾಶವಿದೆ. ಲಾಕ್ಡೌನ್ ಅವಧಿಯಲ್ಲಿ ಔಷಧ ಅಂಗಡಿ ಮತ್ತು ಕೃಷಿ ಚಟುವಟಿಕೆಗೆ ಮಾತ್ರ ಅವಕಾಶವಿದ್ದು, ಗ್ರಾಮಗಳ ಗಡಿಯನ್ನು ಬ್ಯಾರಿಕೇಡ್ ಮೂಲಕ ಮುಚ್ಚಲಾಗಿರುತ್ತದೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.