ಕರಾವಳಿ

ತುರ್ತು ಸುದ್ಧಿಗೋಷ್ಠಿ ಕರೆದ ಸಿಎಂ : ಲಾಕ್‌ಡೌನ್ ಮತ್ತೆ ವಿಸ್ತರಣೆ! ಇಂದು ಸಂಜೆ ನಿರ್ಧಾರ

Pinterest LinkedIn Tumblr

ಬೆಂಗಳೂರು, ಜೂನ್.03 : ಲಾಕ್‌ಡೌನ್ ಮತ್ತೆ ವಿಸ್ತರಣೆ ಕುರಿತಂತೆ ಇಂದು ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಲಾಕ್‌ಡೌನ್ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಅವರು ಇಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜೂನ್ 7ರವರೆಗೆ ಜಾರಿಯಲ್ಲಿರುವಂತ ಲಾಕ್ ಡೌನ್, ಮತ್ತೆ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು, ತಜ್ಞರು ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಜೂನ್.7ರ ನಂತ್ರ ಮತ್ತೆ 1 ವಾರ ಲಾಕ್ ಡೌನ್ ವಿಸ್ತರಣೆ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವಂತ ಇತರೆ ಕೆಲ ವರ್ಗದವರಿಗೂ ಕೊರೊನಾ 2ನೇ ಪ್ಯಾಕೇಜ್ ಘೋಷಣೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಎಂ ಯಡಿಯೂರಪ್ಪ ಅವರು ಮಾಹಿತಿ ನೀಡಲಿದ್ದಾರೆ. ಈಗಾಗಲೇ ಮೊದಲ ಕೊರೊನಾ ಪ್ಯಾಕೇಜ್‌ನಲ್ಲಿ 1250 ಕೋಟಿ ರೂ. ಘೋಷಣೆ ಮಾಡಿದ್ದರು. ಅದೇ ರೀತಿ 2ನೇ ಹಂತದ ಪ್ಯಾಕೇಜ್‌ನಲ್ಲಿ ಇತರ ವರ್ಗಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

2ನೇ ಹಂತದ ಪ್ಯಾಕೇಜ್‌ನಲ್ಲಿ ತಮ್ಮನ್ನು ಪರಿಗಣಿಸುವಂತೆ ಹಲವು ಕಾರ್ಮಿಕ ವರ್ಗಗಳು, ಶಿಕ್ಷಕರು, ರೈತರು, ನೇಕಾರರು ಸಿಎಂ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದರು.

Comments are closed.