
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕೋವಿಡ್ ಪರೀಕ್ಷೆಯನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಪಾಸಿಟಿವ್ ಪ್ರಮಾಣವನ್ನು ಕಡಿಮೆಗೊಳಿಸುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹಾಪೌರರ ಅಧ್ಯಕ್ಷತೆಯಲ್ಲಿ ಹಾಗೂ ಆಯುಕ್ತರ ಉಪಸ್ಥಿತಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಶೆದ್ಯಾಧಿಕಾರಿಗಳು, ನೋಡಲ್ ಅಧಿಕಾರಿಗಳ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಲಾಗಿ ಈ ಕೆಳಗಿನ ನಿರ್ದೇಶನವನ್ನು ನೀಡಲಾಗಿದೆ.

1. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ 1226 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 50 ಕ್ಕೂ ಅತೀ ಹೆಚ್ಚು ಪ್ರಕರಣಗಳಿರುವ 2 ವಾರ್ಡ್ಗಳು ಕಂಡು ಬಂದಿದ್ದು, ಅಲ್ಲದೆ ನಗರ ವ್ಯಾಪ್ತಿಯಲ್ಲಿ ಶೇ. 17 ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು, ಈ ಸೋಂಕಿತ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ವಿಶೇಷವಾಗಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಕೋವಿಡ್ ಪ್ರಕರಣ ವರದಿಯಾದಲ್ಲಿ ಸದ್ರಿ ಸ್ಥಳಗಳನ್ನು ಕೇಂದ್ರಿಕರಿಸಿ ಗರಿಷ್ಟ ಪ್ರಮಾಣದಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚುವ ಬಗ್ಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಯುಕ್ತರು ನಿರ್ದೇಶನ ನೀಡಿದರು.

2. ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯುವ ಸಲುವಾಗಿ ಪತ್ತೆ ಹಚ್ಚಲಾಗುವ ಪ್ರಾಥಮಿಕ ಸಂಪರ್ಕಿತರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ತಪ್ಪಿಸದಂತೆ ನಿಗಾವಹಿಸುವುದು ಅತೀ ಅವಶ್ಯವಿರುವುದರಿಂದ ಸಂಚಾರಿ ಗಂಟಲು ದ್ರವ ಪರೀಕ್ಷೆ ವ್ಯವಸ್ಥೆಯಡಿ ಪಾಲಿಕೆಯಿಂದ ಪ್ರತ್ಯೇಕವಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯುವುದು ಸೂಕ್ತವಾಗಿದ್ದು, ಈ ನಿಟ್ಟಿನಲ್ಲಿ ಕೋವಿಡ್ ಪರೀಕ್ಷೆಗೆ ಸಂಬಂಧಿಸಿ ಪ್ರತ್ಯೇಕವಾದ ದೂರವಾಣಿ ಸಂಖ್ಯೆಯನ್ನು ನಿಗಧಿಪಡಿಸಿಕೊಂಡು “ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ” ಕಾರ್ಯಾಚರಣೆಯನ್ನು 2 ದಿನಗಳೊಳಗಾಗಿ ಪ್ರಾರಂಭಿಸುವಂತೆ ಮಹಾಪೌರರು ನಿರ್ದೇಶನ ನೀಡಿದರು.
3. ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಒಟ್ಟು 121 ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿದ್ದು, ರೂ. 61,150/- ದಂಡವನ್ನು ವಿಧಿಸಲಾಗಿದೆ, ಈ ಪೈಕಿ 7 ಅಂಗಡಿಗಳ ಉದ್ದಿಮೆ ಪರವಾಣಿಗೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
4. ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರಿ ಗಂಟಲು ದ್ರವ ಪರೀಕ್ಷೆ ವ್ಯವಸ್ಥೆಯನ್ನು ಪ್ರಾರಂಭಿಸಲು ಈಗಾಗಲೇ 6 ತಂಡಗಳನ್ನು ರಚಿಸಲಾಗಿದ್ದು, ಸದ್ರಿ ತಂಡದಲ್ಲಿರುವ ಸಿಬ್ಬಂದಿಗಳಿಗೆ ತರಭೇತಿಯನ್ನು ನೀಡಿ ಶೀಘ್ರದಲ್ಲಿ ಪ್ರಾರಂಭಿಸಲಾಗುವುದೆಂದು ಡಾ|| ಅಶೋಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿಯವರು ತಿಳಿಸಿದರು.
5. ಮಹಾಪೌರರು ಲಸಿಕೆ ನೀಡುವ ಕಾರ್ಯಕ್ರಮದ ಬಗ್ಗೆ ವಿವರಣೆ ಕೋರಿದಾ – ಪ್ರಸ್ತುತ ಜಿಲ್ಲಾಡಳಿತ ನಿರ್ದೇಶನದಂತೆ ಆನ್ಲೈನ್ ನೋಂದಣಿದಾರರಿಗೆ ಹಾಗೂ ಆದ್ಯತ ವಲಯವನ್ನು ಕೇಂದ್ರ್ರಿಕರಿಸಿಕೊಂಡು ವ್ಯವಸ್ಥಿತವಾಗಿ ನಿರ್ವಹಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್ ಭಂಡಾರಿ ಯವರು ಮಾಹಿತಿ ನೀಡಿದರು.
Comments are closed.