
ಮಂಗಳೂರು, ಜೂನ್ 25 : ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರವರು ಜೂನ್ 25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಜೂನ್ 25 ಮಧ್ಯಾಹ್ನ 2 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮುಂಗಾರು ಪ್ರಾರಂಭವಾಗುವ ಹಿನ್ನೆಲೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಸಂಜೆ 4-30 ಕ್ಕೆ ಮಂಗಳೂರು ತಾಲೂಕಿನ ಕಾವೂರಿನ ಕುಂಜತ್‍ಬೈಲು ಗ್ರಾಮದಲ್ಲಿ ಹಡಿಲು ಕೃಷಿ ಭೂಮಿಯಲ್ಲಿ ಯಾಂತ್ರೀಕರಣದ ಮೂಲಕ ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ನಂತರ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments are closed.