
ಮಂಗಳೂರು, ಜುಲೈ 01 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿಯಿರುವ ವೈದ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕ ನೆಲೆಯಲ್ಲಿ ಆರು ತಿಂಗಳ ಅವಧಿ ಅಥವಾ ಮುಂದಿನ ಆದೇಶ ಯಾವುದು ಮೊದಲೋ ಅಲ್ಲಿಯವರೆಗೆ (ಮಾಸಿಕ ಕ್ರೋಢಿಕೃತ ವೇತನ ರೂ. 52.640) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ವಿಳಾಸ www.mangaloreuniversity.ac.in ಅನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.