ಕರ್ನಾಟಕ

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನದ ಬಗ್ಗೆ ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ

Pinterest LinkedIn Tumblr

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಿ.ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದಿದ್ದಾರೆ.

ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

 

 

Comments are closed.