ಬೆಂಗಳೂರು: ಕೋವಿಡ್ ಎರಡನೇ ಅಲೆ ಕಡಿಮೆಯಾಗುತ್ತಿದೆ ಎನ್ನುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆಸಿದ್ದು ದೇವರ ಭಕ್ತರಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಸರಕಾರ ಸಮ್ಮತಿ ನೀಡಿದ್ದು ಇಂದು (ಶನಿವಾರ) ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮುಜರಾಯಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಈ ಮೂಲಕ ಎರಡು ತಿಂಗಳ ಬಳಿಕ ದೇವಸ್ಥಾನಗಳು ಓಪನ್ ಆಗುತ್ತಿದ್ದು, ಜುಲೈ 5ರಿಂದ ಭಕ್ತರು ದೇವರ ದರ್ಶನ ಪಡೆಯಲು ಹಾಗೂ ಆರತಿ ಸೇವೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ರೀತಿಯ ಹೋಮ-ಹವನ ಮಾಡುವುದಕ್ಕೆ ಅವಕಾಶ ಇಲ್ಲ, ಪ್ರಸಾದ ವಿತರಣೆ ಮಾಡುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.
ಮಾತ್ರವಲ್ಲದೇ ದೇವಳಕ್ಕೆ ಬರುವ ಭಕ್ತರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟವರು ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
Comments are closed.