ಕರ್ನಾಟಕ

ದ್ವಿತೀಯ ಪಿಯುಸಿ ರಿಪೀಟರ್ಸ್ ಪರೀಕ್ಷೆ ಇಲ್ಲದೇ ಪಾಸ್; ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ರಾಜ್ಯ ಸರ್ಕಾರ

Pinterest LinkedIn Tumblr

ಬೆಂಗಳೂರು: ದ್ವಿತೀಯ ಪಿಯುಸಿ ರಿಪೀಟರ್ಸ್​ಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ. ಶೇ.35ರಷ್ಟು ಅಂಕ ನೀಡಿ ಎಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನು ತೇರ್ಗಡೆ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶೇ.35 ರ ಜೊತೆ ಶೇ.5 ರಷ್ಟು ಗ್ರೇಸ್ ಮಾರ್ಕ್ಸ್ ಕೂಡ ನೀಡಲಿದೆ.

ಇನ್ನು ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಆಗಸ್ಟ್ 31ರೊಳಗೆ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರೊಳಗೆ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಸೂಚನೆ ನೀಡಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಹಿಂದಿನ ವರ್ಷದ ಅಂಕವನ್ನು ತಿರಸ್ಕರಿಸಿದವರಿಗೆ ಆಯ್ಕೆ ನೀಡಲು ತಿಳಿಸಿದೆ. ಖಾಸಗಿ ಪರೀಕ್ಷಾರ್ಥಿಗಳು ಹಿಂದಿನ ಬಾರಿಯ ಅಂಕವನ್ನೇ ಪಡೆಯಬಹುದು. ಅಥವಾ ಪರೀಕ್ಷೆ ನಡೆಸಿದಾಗ ಬರೆಯಬಹುದು ಎಂದು ನಿರ್ದೇಶನ ನೀಡುವ ಕೋರ್ಟ್, ಅಂಕ ಉತ್ತಮಪಡಿಸಿಕೊಳ್ಳ ಬಯಸಿದ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದೆ.

ಹೈಕೋರ್ಟ್ ಮೊರೆ ಹೋಗಿದ್ದ ರಿಪೀಟರ್ಸ್
ಮೊದಲ ಬಾರಿ ಪಿಯು ಪರೀಕ್ಷೆ ಎದುರಿಸುತ್ತಿದ್ದ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್‌ ಮಾಡಲಾಗಿದೆ. ಆದರೆ, ರಿಪೀಟರ್ಸ್‌ಗೆ ಮಾತ್ರ ಪಿಯು ಪರೀಕ್ಷೆ ನಡೆಸುತ್ತಿರುವುದು ಏಕೆ ಎಂದು ಪ್ರಶ್ನಿಸಿ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳು ಈ ಮುನ್ನವೇ ಹೈಕೋರ್ಟ್​ನ ಮೊರೆ ಹೋಗಿದ್ದರು. ಶಿಕ್ಷಣ ಇಲಾಖೆ ತಾರತಮ್ಯ ಅನುಸರಿಸುತ್ತಿದೆ ಎಂದು ದೂರಿರುವ ರಿಪೀಟರ್ಸ್​ ವಿದ್ಯಾರ್ಥಿಗಳು ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದ ಶಿಕ್ಷಣ ಇಲಾಖೆಯ ನಿರ್ಧಾರ ವಿರೋಧಿಸಿ ಕೋರ್ಟ್‌ ಮೆಟ್ಟಿಲೇರಿದ್ದರು.

 

Comments are closed.