ಕರಾವಳಿ

ನೂತನ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಕಟೀಲ್

Pinterest LinkedIn Tumblr

ಮಂಗಳೂರು : ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರಾದ ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ, ಭಗವಂತ ಖೂಬಾ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.

ನರೇಂದ್ರ ಮೋದಿ ನೇತ್ರತ್ವದ ಸರ್ಕಾರದಿಂದ ದೇಶ ಇಂದು ಸರ್ವಾಂಗೀಣ ಅಭಿವೃದ್ದಿಯತ್ತ ಸಾಗುತ್ತಿದೆ.

ಹಿರಿಯ ನಾಯಕ ಪ್ರಹ್ಲಾದ ಜೋಷಿ , ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರ ಜತೆ ಈಗ ರಾಜ್ಯದ 4 ಮಂದಿಗೆ ಕೇಂದ್ರ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ನೀಡಿರುವುದು ಬಿಜೆಪಿ ಕಾರ್ಯಕರ್ತರಿಗೆ ಸಂತಸ ತಂದಿದೆ.

ನೂತನ ಸಚಿವರಿಂದ ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಶಕ್ತಿ ದೊರೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.