ಕರ್ನಾಟಕ

ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?: ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಥಳಿಸಿದ್ದನ್ನು ಪ್ರಶ್ನಿಸಿದ ಬಿಜೆಪಿ

Pinterest LinkedIn Tumblr

ಬೆಂಗಳೂರು: ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.

ಈ ಸಂಬಂಧ ಟ್ಟೀಟ್ ಮಾಡಿರುವ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮೊದಲು ಅರಿತುಕೊಳ್ಳಬೇಕು. ಈ ಹಿಂದೆ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಮಹಾನಾಯಕ ಡಿಕೆಶಿಯವರೇ ಭೂಗತ ಜಗತ್ತಿನ ರೀತಿಯ ವರ್ತನೆಗಳು ನಿಮಗೆ ಅನಿವಾರ್ಯ ಎಂದಾದರೆ ಸಾರ್ವಜನಿಕ ಜೀವನ ಬಿಟ್ಟುಬಿಡಿ ಎಂದು ಸಲಹೆ ನೀಡಿದೆ.

ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ. ನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆ ಎಂದು ಇತ್ತೀಚೆಗೆ ಶಿವಕುಮಾರ್ ಗದರಿಸಿದ್ದರು. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು? ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!? ಎಂದು ಬಿಜೆಪಿ ಪ್ರಶ್ನಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡ ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ ಬಿಜೆಪಿ ತಿಳಿಸಿದೆ.

ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಿಂಭಾಗ ಬರುತ್ತಿದ್ದ. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

Comments are closed.