ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಜು.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

(ಸಾಂದರ್ಭಿಕ ಚಿತ್ರ)
ರಾಜ್ಯಾದ್ಯಂತ ಜು.15ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.11ರಂದು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು.12 ಮತ್ತು 13ರಂದು ‘ರೆಡ್ ಅಲರ್ಟ್’ ನೀಡಲಾಗಿದೆ ಎಂದು ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಲಕ್ಷಣ ಕಂಡು ಬಂದಿದೆ. ಜು.11ರ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅರ್ಭಟ ತುಸು ಕಡಿಮೆ ಆಗಲಿದೆ. ಈ ಭಾಗದ ಮೂರು ಜಿಲ್ಲೆಗಳ ಕೆಲವೆಡೆ 12 ಸೆಂ.ಮೀ.ಗಿಂತ ಹೆಚ್ಚು ಮಳೆ ಬೀಳಲಿದ್ದು, ಜು.12ರಿಂದ 14ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರಿಕೆಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
Comments are closed.