ಕರ್ನಾಟಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

Pinterest LinkedIn Tumblr

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಅಭಯ್ ಶ್ರೀನಿವಾಸ್ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ.

ರಾಜಭವನದಲ್ಲಿ ನಡೆದ ಕಾರ್ಯಕ್ರ್ಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನೂ ಹಲವಾರು ಮಂದಿ ಬಾಗವಹಿಸಿದ್ದರು.

ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಸಹ ಸೇವೆ ಸಲ್ಲಿಸಿದ್ದರು.

Comments are closed.