ಕರಾವಳಿ

ಸ್ಕೂಟಿಯಲ್ಲಿ ಗಾಂಜಾ ಸಾಗಾಟ: ಕೋಟ ಪೊಲೀಸರಿಂದ ಎಸ್ಕೇಪ್ ಇಬ್ರಾಹಿಂ ಅರೆಸ್ಟ್

Pinterest LinkedIn Tumblr

ಉಡುಪಿ: ಕೋಟದಿಂದ ಪಡುಕರೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ ನೇತೃತ್ವದ ತಂಡ ಸೋಮವಾರ ಬಂಧಿಸಿದ್ದಾರೆ.

ಕೋಟತಟ್ಟು ಪಡುಕರೆಯ ಇಬ್ರಾಹಿಂ ಅಲಿಯಾಸ್ ಆಕಾಶವಾಣಿ ಇಬ್ರಾಹಿಂ ಯಾನೆ ಎಸ್ಕೇಪ್ ಇಬ್ರಾಹಿಂ ಎಂದು ಗುರುತಿಸಲಾಗಿದ್ದು ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವಾಗ ಕೋಟದ ವರುಣತೀರ್ಥ ಕೆರೆ ಸಮೀಪ ಅಡ್ಡಗಟ್ಟಿ ಆರೋಪಿಯನ್ನು ಬಂಧಿಸಲಾಗಿದೆ.

35 ಸಾವಿರ ಮೌಲ್ಯದ ಸುಮಾರು 1ಕೆ.ಜಿ 420 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.