ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಜಮ್ಮು-ಕಾಶ್ಮೀರದ ಪುಲ್ವಾಮದ ಬಳಿ ಇಬ್ಬರು ಉಗ್ರರನ್ನು ಪೊಲೀಸರು ಹಾಗೂ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದ್ದಾರೆ. ಈ ಘಟನೆ ಪುಲ್ವಾಮದ ನಂಬಿಯಾನ್ ಹಾಗೂ ಮಾರ್ಸಾರದಲ್ಲಿ ನಡೆದಿದೆ.
ಉಗ್ರರು ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಯೋಧರು ಹಾಗೂ ಪೊಲೀಸರು ಕಾಡಿನ ಪ್ರದೇಶದಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಉಗ್ರರು ಸಾವನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಅದೃಷ್ಟವಶಾತ್ ಯಾವುದೇ ಯೋಧ ಹಾಗೂ ಪೊಲೀಸರಿಗೆ ಗಾಯಗಳಾಗಿಲ್ಲ.
ಮೋಸ್ಟ್ ವಾಂಟೆಡ್ ಉಗ್ರ ಹತ!
ಇನ್ನು ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಅಗ್ರಗಣ್ಯ ಪಾಕಿಸ್ತಾನದ ಉಗ್ರ, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನ ಸಂಘಟನೆಯ ಲಂಬೂ ಎನ್ನುವಾತ ಸಾವನಪ್ಪಿದ್ದಾನೆ ಎಂದು ಜಮ್ಮು-ಕಾಶ್ಮೀರದ ಐಜಿಪಿ ವಿಜಯಕುಮಾರ್ ತಿಳಿಸಿದ್ದಾರೆ. ಮತ್ತೊಬ್ಬ ಉಗ್ರನ ಗುರುತು ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
Comments are closed.