ಕರಾವಳಿ

ಜಾವೆಲಿನ್ ಥ್ರೋʼನಲ್ಲಿ ಇತಿಹಾಸ ಸೃಷ್ಟಿಸಿದ ʼನೀರಜ್ ಚೋಪ್ರಾ : ಮೊದಲ ಬಾರಿಗೆ ಭಾರತಕ್ಕೆ ಚಿನ್ನದ ಗೌರವ

Pinterest LinkedIn Tumblr

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಅಥ್ಲೀಟ್ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಒಲಿಂಪಿಕ್ ಇತಿಹಾಸದಲ್ಲಿ ಜಾವೆಲಿನ್‌ ಎಸೆತದಲ್ಲಿ ಭಾರತ ಮೊದಲ ಬಾರಿಗೆ ಚಿನ್ನವನ್ನ ಪಡೆದುಕೊಂಡಿದೆ. ಇದರೊಂದಿಗೆ ಭಾರತವು ಟೋಕಿಯೊದಲ್ಲಿ ಏಳು ಪದಕಗಳನ್ನುಗೆದ್ದಿದ್ದು, ಲಂಡನ್ ಒಲಿಂಪಿಕ್ಸ್‌ನಲ್ಲಿ 6 ಪದಕಗಳ ದಾಖಲೆಯನ್ನು ಮುರಿದಿದೆ.

ಒಲಿಂಪಿಕ್ಸ್​ನಲ್ಲಿ ಭಾರತದ 120 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಶತಮಾನದ ಬಳಿಕ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ದಕ್ಕಿದೆ. ಜಾವಲಿನ್​ ಥ್ರೋನಲ್ಲಿ ಭಾರತದ ನೀರಜ್​​ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 120 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಹೆಗ್ಗಳಿಕೆಗೆ ನೀರಜ್​ ಪಾತ್ರರಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇದು 7ನೇ ಪದಕವಾಗಿದೆ.

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದಾರೆ.

ನೀರಜ್ ಚೋಪ್ರಾ ಅವರು ಶೂಟರ್ ಅಭಿನವ್ ಬಿಂದ್ರಾ (2008) ನಂತರ ವೈಯಕ್ತಿಕ ವಿಭಾಗದಲ್ಲಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಎರಡನೇ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾದರು.

ಚೋಪ್ರಾ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್ ಎಸೆದಿದ್ದು, ಇದು ಫೈನಲ್ ನಲ್ಲಿ ಅವರ ಶ್ರೇಷ್ಠ ಪ್ರದರ್ಶನವಾಗಿತ್ತು.

ಮೊದಲ ಪ್ರಯತ್ನದಲ್ಲಿ 87.03 ಮೀ.ದೂರಕ್ಕೆ ಜಾವೆಲಿನ್ ಎಸೆದರು. ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್ ಎಸೆದು ಶ್ರೇಷ್ಠ ಪ್ರದರ್ಶನ ನೀಡಿದರು. ಈ ಮೂಲಕ ಅಗ್ರ ಸ್ಥಾನವನ್ನು ಭದ್ರಪಡಿಸಿಕೊಂಡರು. ಮೂರನೇ ಪ್ರಯತ್ನದಲ್ಲಿ 76.79 ಮೀ.ದೂರಕ್ಕೆ ಎಸೆದರು. ನಾಲ್ಕನೇ ಪ್ರಯತ್ನವು ಫೌಲ್ ಥ್ರೋ ಆಗಿತ್ತು.

ಐದನೇ ಪ್ರಯತ್ನದಲ್ಲಿ ಮತ್ತೊಮ್ಮೆ ಫೌಲ್ ಆಗಿರುವ ಚೋಪ್ರಾ ಅಗ್ರ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಗಣರಾಜ್ಯದ ಜಾಕಬ್ ವಾಡ್ಲೆಜ್ಚ್ (86.67 ಮೀ) ಬೆಳ್ಳಿ ಪದಕ ಜಯಿಸಿದರೆ ಹಾಗೂ ವೆಸೆಲಿ ವಿಟೆಜ್ಸ್ಲಾವ್ (85.44 ಮೀ.)ಕಂಚಿನ ಪದಕ ಜಯಿಸಿದರು.

ಚೋಪ್ರಾ ಅರ್ಹತಾ ಸುತ್ತಿನಲ್ಲಿ 86.65 ಮೀ.ದೂರಕ್ಕೆ ಜಾವೆಲಿನ್ ಎಸೆದು ಫೈನಲ್ ಗೆ ಪ್ರವೇಶಿಸಿದ್ದರು.

Comments are closed.