ಕರ್ನಾಟಕ

ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಸವರಾಜ ಬೊಮ್ಮಾಯಿ

Pinterest LinkedIn Tumblr

ತುಮಕೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಮೊದಲಿಗೆ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ಸಿಎಂ, ಬಳಿಕ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಈ ವೇಳೆ ಸಂಸದ ಜಿ. ಎಸ್. ಬಸವರಾಜ್, ಸಚಿವರಾದ ಜೆ. ಸಿ. ಮಾಧುಸ್ವಾಮಿ, ಬಿ.ಸಿ.ನಾಗೇಶ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಶಾಸಕರಾದ ಜಿ. ಬಿ. ಜ್ಯೋತಿ ಗಣೇಶ್, ಡಾ. ಸಿ. ಎಂ. ರಾಜೇಶ್ ಗೌಡ, ಎಂ. ಪಿ. ರೇಣುಕಾಚಾರ್ಯ, ಬಿಜೆಪಿ ತುಮಕೂರು ‌ಜಿಲ್ಲಾಧ್ಯಕ್ಷ ಸುರೇಶ್ ಗೌಡ ಮತ್ತಿತರರು ಸಿಎಂಗೆ ಸಾಥ್ ನೀಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದೆ, ಅದೇ ರೀತಿ ಸಿದ್ದಲಿಂಗ ಶ್ರೀಗಳ ಆಶೀರ್ವಾದವನ್ನೂ ಪಡೆದೆ ಎಂದರು. ಸಿದ್ಧಗಂಗಾ ಮಠವು ದಾನಕ್ಕೆ, ಅನ್ನದಾನಕ್ಕೆ ಪ್ರಸಿದ್ಧವಾಗಿದೆ. ಮಠಕ್ಕೆ ಬಂದಾಗೆಲ್ಲಾ ಪ್ರೇರಣೆ ಪಡೆದುಕೊಂಡಿದ್ದೇನೆ. ನಾನು ಮುಖ್ಯಮಂತ್ರಿ ಆದ ಮೇಲೆ ಪ್ರಥಮ ಬಾರಿಗೆ ಮಠಕ್ಕೆ ಬರುತ್ತಿದ್ದೇನೆ ಎಂದ ಸಿಎಂ ಬೊಮ್ಮಾಯಿ, ನಾಡಿನ ಸೇವೆ ಮಾಡಲು ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಈಗ ನೇರವಾಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದೇನೆ. ಬಳಿಕ ಖಾತೆ ಹಂಚಿಕೆ ಮಾಡಲಾಗುವುದು ಎಂದರು.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದರು. ನನಗೆ ಅತೃಪ್ತಿಯಿಲ್ಲ, ನಾವು ಸಂಪೂರ್ಣ ತೃಪ್ತರೇ ಎಂದು ಲೋಕಾಭಿರಾಮವಾಗಿ ಮಾತನಾಡಿದ ರೇಣುಕಾಚಾರ್ಯ, ನಾವು ಬೋಗಿಗಳು, ಸಿಎಂ ಅವರು ಇಂಜಿನ್ ಇದ್ದಂತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

Comments are closed.