
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1598 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ.
1914 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2857776ಕ್ಕೆ ಹೆಚ್ಚಾಗಿದೆ. ಸೋಂಕಿನಿಂದ ಇಂದು 20 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 36793ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23930 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.1.09 ರಷ್ಟಿದ್ದು, ಮರಣ ಪ್ರಮಾಣ ಶೇ. 1.25 ರಷ್ಟಿದೆ. ಬೆಂಗಳೂರಿನಲ್ಲಿ 348 ಹೊಸ ಪ್ರಕರಣ ಪತ್ತೆಯಾಗಿದ್ದು, 366 ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.
Comments are closed.