ರಾಮನಗರ: ಕನ್ನಡ ಸಿನಿಮಾದ ಶೂಟಿಂಗ್ ವೇಳೆ ಫೈಟರ್ ಓರ್ವ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲೇ ನಡೆದಿದೆ. ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ತಮಿಳುನಾಡು ಮೂಲದ ಫೈಟರ್ ವಿವೇಕ್ (34) ಮೃತಪಟ್ಟಿದ್ದಾರೆ.

ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಮೂಲಕ ರೋಪ್ ಎಳೆಯುವಾಗ ಫೈಟರ್ ವಿವೇಕ್ ಅವರಿಗೆ ವಿದ್ಯುತ್ ತಂತಿ ತಗುಲಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತ ವಿವೇಕ್ ತಮಿಳುನಾಡು ಮೂಲದವರಾಗಿದ್ದು ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ವಿವೇಕ್ ಮೃತದೇಹವನ್ನು ಇರಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಫೈಟ್ ಮಾಸ್ಟರ್ ವಿನೋದ್ ಹಾಗೂ ನಿರ್ದೇಶಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮುಂಜಾಗೃತಾ ಕ್ರಮಕೈಗೊಳ್ಳದ ಹಿನ್ನೆಲೆ ಈ ದುರಂತ ನಡೆದಿದೆ. ಆತನ ಸಾವಿಗೆ ನ್ಯಾಯ ಸಿಗಬೇಕು ಎಂದು ಚಿತ್ರದ ನಾಯಕ ಅಜಯ್ ರಾವ್ ಹೇಳಿದ್ದಾರೆ.
Comments are closed.