ಕರ್ನಾಟಕ

ನನಗೆ ಸಚಿವ ಸ್ಥಾನ ಸಿಗದಿರಲು ಒಬ್ಬರು ಮಾಡಿದ ಫೋನ್ ಕಾಲ್ ಕಾರಣ: ಶಾಸಕ ಎಸ್.ಎ ರಾಮದಾಸ್ ಆರೋಪ

Pinterest LinkedIn Tumblr

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿಗೆ ಬಂದರೂ ಸಹ ಸಿಎಂ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಎಸ್.ಎ ರಾಮದಾಸ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿಗೆ ಬಂದಿದ್ದರೂ ಕೃಷ್ಣರಾಜ ಶಾಸಕ ಎಸ್.ಎ. ರಾಮದಾಸ್ ಭೇಟಿ ಮಾಡಲಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿಸ್ಥಾನ ತಪ್ಪಿರುವುದರ ಹಿನ್ನೆಲೆಯಲ್ಲಿ ರಾಮದಾಸ್ ಅವರು ಸಿಎಂ ಬೊಮ್ಮಾಯಿ ಭೇಟಿ ಮಾಡಿಲ್ಲ ಎಂದು ತಿಳಿದು ಬಂದಿದೆ.

ಚಾಮುಂಡಿಬೆಟ್ಟದಲ್ಲಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಜಿಲ್ಲೆಯ ಬಿಜೆಪಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇದ್ದರು. ಆದರೆ, ಸಚಿವ ಸ್ಥಾನ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ರಾಮದಾಸ್ ಗೈರು ಎದ್ದು ಕಾಣುತ್ತಿತ್ತು. ಬಿಜೆಪಿ ಕಚೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿದ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲೂ ರಾಮದಾಸ್ ಕಾಣಿಸಲಿಲ್ಲ.

ಸಿಎಂ ನನ್ನನ್ನು ಕೆಆರ್ ಕ್ಷೇತ್ರಕ್ಕೆ ಸೀಮಿತ ಮಾಡಿದ್ದಾರೆ. ಹೀಗಾಗಿ ಕೆ.ಆರ್ ಕ್ಷೇತ್ರವೇ ನನ್ನ ರಾಜ್ಯ, ನನ್ನ ದೇಶ. ಅದ್ದರಿಂದ ಕೆ.ಆರ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಅಂತ ರಾಮದಾಸ್ ಹೇಳಿದ್ದಾರೆ.

ನಾನು ಪಕ್ಷದ ಹಿರಿಯ ನಾಯಕನಾಗಿದ್ದರೂ, ನನಗೆ ಸಚಿವ ಸ್ಥಾನ ಸಿಗದಿರಲು ಒಬ್ಬರು ಮಾಡಿದ ಫೋನ್ ಕಾಲ್ ಕಾರಣ ಎಂಬುದು ಗೊತ್ತಿದೆ ಎಂದು ರಾಮದಾಸ್ ಇದೇ ವೇಳೆ ನುಡಿದರು. ಆದರೆ ಆ ಹಿರಿಯ ನಾಯಕ ಯಾರು ಎಂಬುದನ್ನು ಅವರು ಬಹಿರಂಗ ಪಡಿಸಲಿಲ್ಲ.

ಇನ್ನೂ ರಾಮದಾಸ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಮದಾಸ್ ನನ್ನ ಬಹಳ ಒಳ್ಳೆಯ ಸ್ನೇಹಿತ, ಪಕ್ಷದಲ್ಲಿ ಅವರು ಹಿರಿಯರಿದ್ದಾರೆ, ಅವರನ್ನು ಕರೆಸಿ ಮಾತನಾಡುವೆ ಎಂದು ಹೇಳಿದ್ದಾರೆ.

Comments are closed.