ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಈ ಮೊದಲು ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಈತನನ್ನೂ ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಮೊನ್ನೆ ಬಂಧಿಸಿದ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಭಾಗಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
Comments are closed.