ಆರೋಗ್ಯ

ಮಂಗಳವಾರ ದಾಖಲೆಯ ಕೊರೋನಾ ಲಸಿಕೆ ವಿತರಣೆ: ಒಂದೇ ದಿನ 1.1 ಕೋಟಿ ಜನರಿಗೆ ಡೋಸ್..!

Pinterest LinkedIn Tumblr

ನವದೆಹಲಿ: ದೇಶದಲ್ಲಿ ಮಂಗಳವಾರದಂದು ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

(ಸಾಂದರ್ಭಿಕ ಚಿತ್ರ)

ಮಂಗಳವಾರ ಸಂಜೆ 6 ಗಂಟೆಯವರೆಗೆ ದೇಶದಲ್ಲಿ ಒಂದೇ ದಿನ ದಾಖಲೆಯ 1.09 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ತಿಳಿಸಿದ್ದಾರೆ.

ಈವರೆಗೆ ರಾಜ್ಯಗಳಿಗೆ ಸುಮಾರು 64.36 ಕೋಟಿ ಡೋಸ್ ಲಸಿಕೆಯನ್ನು ಉಚಿತವಾಗಿ ಪೂರೈಸಲಾಗಿದೆ. ರಾಜ್ಯ ನೇರ ಖರೀದಿ ಹಂತದಲ್ಲಿ ಸುಮಾರು 1.5 ಕೋಟಿಗೂ ಹೆಚ್ಚು ಡೋಸ್ ಪೂರೈಕೆಗಾಗಿ ಪೈಪ್ ಲೈನ್ ನಲ್ಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

 

Comments are closed.