ಕರಾವಳಿ

ಕಡಬದ ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿ ಬಂಧನ

Pinterest LinkedIn Tumblr

ಮಂಗಳೂರು: ಕಡಬದ‌ಉದನೆಯ ಗಣಪತಿ ಕಟ್ಟೆಯನ್ನು ಧ್ವಂಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಹಾರ ಮೂಲದ ರವೀಂದ್ರ ಕುಮಾರ್‌ ಎಂದು ಗುರುತಿಸಲಾಗಿದ್ದು ಸದ್ಯ‌ ಆತ ಪೊಲೀಸರ ವಶದಲ್ಲಿದ್ದಾನೆ.

ಸೆ.10ರಂದು ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಉದನೆ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ, ರಾತ್ರಿ ವೇಳೆ ಆರೋಪಿ ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಉದನೆಯಲ್ಲಿ ಓಡಾಡಿಕೊಂಡಿದ್ದ ಆರೋಪಿ ರವೀಂದ್ರ ಕುಮಾರ್‌ ಈ ಹಿಂದ ಆಟೋರಿಕ್ಷಾ ಚಾಲಕನಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ.

Comments are closed.