ಕರ್ನಾಟಕ

ರಾಜ್ಯದ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು:‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಬಿ.ಎಸ್ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು.

ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ ಅಧಿವೇಶನದಲ್ಲಿ ಇಂತಹ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು ಮುಂದಿನ ವರ್ಷದಿಂದ ಈ ಪ್ರಕ್ರಿಯೆ ಮುಂದುವರೆಯಲಿದೆ. ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಲ್ಲಿ ಯಾರಿಗೆ ಪ್ರಶಸ್ತಿ ಕೊಡಬೇಕು ಎನ್ನುವುದು ಗೊಂದಲ ಮೂಡಿಸಿತ್ತು. ನನ್ನ ಜೀವನದಲ್ಲಿ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಇನ್ನು ಈ ಬಗ್ಗೆ ಬಿ.ಎಸ್ ಯಡಿಯೂರಪ್ಪ ಅವರು, ‘ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ’ ಎಂದು‌ ಬರೆದುಕೊಂಡಿದ್ದಾರೆ.

Comments are closed.