ಬೆಂಗಳೂರು: ಕೇಂದ್ರ ಕೃಷಿಸುಧಾರಣಾ ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿರುವುದಾಗಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವಿವಿ ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು.
ಭಾರತ ಬಂದ್ ಕಾರಣ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿವಿ ಕುಲಸಚಿವರಾದ ( ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಆದೇಶ ಹೊರಡಿಸಿದ್ದಾರೆ.
Comments are closed.