ಮೈಸೂರು: ಗ್ರಾಮದೇವತೆ ಮಹದೇವಮ್ಮ ದೇವಾಲಯ ಧ್ವಂಸ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ನಂಜನಗೂಡು ತಹಶೀಲ್ದಾರ್ ಮೋಹನಕುಮಾರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಂಜನಗೂಡು ತಹಶೀಲ್ದಾರ್ ಹುದ್ದೆಗೆ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ತಾಲ್ಲೂಕಿನ ಉಚ್ಚಗಣಿ ಮಹದೇವಮ್ಮ ದೇಗುಲವನ್ನು ಕೆಡವಿದ ಮೇಲೆ ಧಾರ್ಮಿಕ ಭಾವನೆಗಳಿಗೆ ಭಂಗ ತಂದಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳು ಈ ಹಿಂದೆ ಆರೋಪಿಸಿದ್ದಲ್ಲದೆ ಬೃಹತ್ ಪ್ರತಿಭಟನೆ ಕೂಡ ನಡೆದಿತ್ತು.

ಸೋಮವಾರ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಬಳಿಕ ತಹಶೀಲ್ದಾರ್ ಹುದ್ದೆಯನ್ನು ಖಾಲಿ ಬಿಡಲಾಗಿದೆ.
Comments are closed.