ರಾಷ್ಟ್ರೀಯ

ಉತ್ತರಪ್ರದೇಶದ ಹರಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿ ಬಂಧನ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಟ್ವೀಟ್

Pinterest LinkedIn Tumblr

ನವದೆಹಲಿ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುವಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ಎಎನ್​ಐ ವರದಿ ಮಾಡಿದೆ. ಲಖೀಮ್‌ಪುರ್ ಖೇರಿಗೆ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಹರಗಾಂವ್‌ ಬಳಿ ಇಂದು ಮುಂಜಾನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಟ್ವೀಟ್ ಟ್ವೀಟ್ ಮಾಡಿದ್ದು, ಅದರಲ್ಲಿ ಪ್ರಿಯಾಂಕಾ ಪೊಲೀಸರೊಂದಿಗೆ ಮಾತನಾಡುತ್ತಿರುವ ವಿಡಿಯೊವಿದೆ. ಇದನ್ನು ಹಂಚಿಕೊಂಡಿರುವ ಅವರು, ‘ಈ ದೇಶದಲ್ಲಿ ಏನಾಗುತ್ತಿದೆ…? Z+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಗೃಹಬಂಧನದಲ್ಲಿರಿಸಿದ್ದರು. ಪ್ರಿಯಾಂಕಾ ಆ ಆದೇಶವನ್ನು ಧಿಕ್ಕರಿಸಿ ಭಾನುವಾರ ರಾತ್ರಿ ಲಖನೌದಿಂದ ಲಖಿಂಪುರ್ ಖೇರಿಗೆ ತೆರಳಿದರು. ಉತ್ತರ ಪ್ರದೇಶ ಪೊಲೀಸರು ಇಂದು (ಸೋಮವಾರ) ಬೆಳಗಿನ ಜಾವ 5.30 ರ ಸುಮಾರಿಗೆ ಹರಗಾಂವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರಿಯಾಂಕಾರನ್ನು ಬಂಧಿಸಿದ್ದಾರೆ. ಅವರನ್ನು ಸೀತಾಪುರ ಜಿಲ್ಲೆಯ ಅತಿಥಿ ಗೃಹಕ್ಕೆ ಕರೆದೊಯ್ಯಲಾಗಿದೆ.

Comments are closed.