ಕರ್ನಾಟಕ

ಹಾನಗಲ್ ಕ್ಷೇತ್ರದ ಬೈ ಎಲೆಕ್ಷನ್ ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ ವಿಜಯೇಂದ್ರ ಹೆಸರು ಸೇರ್ಪಡೆ

Pinterest LinkedIn Tumblr

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಉಪಚುನಾವಣೆಯ ಬಿಜೆಪಿ ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಡಕ್ಕೆ ಮಣಿದು ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಿಎಸ್‌ವೈ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಹಾನಗಲ್ ಉಸ್ತುವಾರಿಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಮೊದಲಿಗೆ ಘೋಷಣೆಯಾದ ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆಯ ಪಕ್ಷದ ಉಸ್ತುವಾರಿಗಳ ಪಟ್ಟಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಇರಲಿಲ್ಲ. ಈ ಕುರಿತಂತೆ ವಿಜಯೇಂದ್ರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿ.ಎಲ್.ಸಂತೋಷ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದರು. ಇದೀಗ ಬಿಜೆಪಿಯು ಹಾನಗಲ್ ಉಪ ಚುನಾವಣೆಯ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರನ್ನು ಸೇರಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.

ಅಭಿಮಾನಿಗಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಟ್ವೀಟ್ ಮಾಡಿ, ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ ಎಂದಿದ್ದರು.

Comments are closed.