ಬೆಂಗಳೂರು: ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಯಲಿದೆ. ಅಕ್ಟೋಬರ್ 7ರಂದು ಸಂಜೆ ದಸರಾ ಉದ್ಘಾಟನೆಯಾದರೆ 15ರಂದು ವಿಜಯದಶಮಿಯಂದು ಮುಕ್ತಾಯವಾಗಲಿದೆ. ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

(ಸಂಗ್ರಹ ಚಿತ್ರ)
ಅಕ್ಟೋಬರ್ 7ರಂದು ಸಂಜೆ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬಕ್ಕೆ ಚಾಲನೆ, ಮೈಸೂರು ದಸರಾ ಉದ್ಘಾಟನೆಗೆ 100 ಜನರಿಗೆ ಅವಕಾಶ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 400 ಜನರ ಮಿತಿ, ದಸರಾದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ 1 ಡೋಸ್ ಲಸಿಕೆ ಪಡೆದಿರಬೇಕು, ಹೊರಗಿನಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಡ್ಡಾಯ.
ಅರಮನೆ ಆವರಣದಲ್ಲಿ ದಸರಾ ನಡೆಯಬೇಕಾಗಿದ್ದು, ಜನರು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು, ವರ್ಚುವಲ್ ಮೂಲಕ ಜಂಬೂ ಸವಾರಿಗೆ ವೀಕ್ಷಣೆ, ಕಾರ್ಯಕ್ರಮದಲ್ಲಿ 400ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಅಕ್ಟೋಬರ್ 15ರಂದು ನಡೆಯುವ ಜಂಬೂ ಸವಾರಿ ಹಾಗೂ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶವಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸೂಚನೆ ಪಾಲಿಸಬೇಕು ಇತ್ಯಾದಿ ನಿಯಮಗಳು ಸರ್ಕಾರದ ಮಾರ್ಗಸೂಚಿಯಲ್ಲಿವೆ.
ಈ ಬಾರಿ ಕೂಡ ಸರಳ ದಸರಾ ಆಚರಣೆಗೆ ಅವಕಾಶ ನೀಡಲಾಗಿದ್ದು ರಾಜ್ಯದ ಬೇರೆ ಕಡೆಗಳಲ್ಲಿ 400ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸೂಚಿಸಲಾಗಿದೆ.
Comments are closed.