ಕರಾವಳಿ

ಇಂದು ರಾಷ್ಟ್ರಪತಿಗಳು ಮಂಗಳೂರಿಗೆ… ಸಂಜೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಸಾಧ್ಯತೆ?

Pinterest LinkedIn Tumblr

ಮಂಗಳೂರು : ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ನಗರದ ಸರ್ಕೀಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿರುವ ಅವರು ಶುಕ್ರವಾರ ಬೆಳಗ್ಗೆ ಶೃಂಗೇರಿಯ ಶ್ರೀ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಸಂಜೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಿ, ಆ.8ರ ಸಂಜೆ ಮಂಗಳೂರಿನಿಂದ ನವದೆಹಲಿಗೆ ತೆರಳಲಿದ್ದಾರೆ.

ಮಂಗಳೂರಿಗೆ ರಾಷ್ಟ್ರಪತಿಯವರು ಆಗಮಿಸುವ ಹಿನ್ನೆಲೆಯಲ್ಲಿ ಗರಿಷ್ಠ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್‌ ಸೇರಿದಂತೆ ರಾಷ್ಟ್ರಪತಿಯವರ ಬೆಂಗಾವಲು ವಾಹನಗಳಿಂದ ಬಜಪೆಯಲ್ಲಿರುವ ಮಂಗಳೂರು ವಿಮಾನ ನಿಲ್ದಾಣ ಮತ್ತು ಕದ್ರಿಯ ಸರ್ಕೀಟ್ ಹೌಸ್ ವರೆಗೆ ತಾಲೀಮು ನಡೆಸಿದರು . ರಾಜ್ಯ ಅಪರಾಧ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ಭದ್ರತಾ ವ್ಯವಸ್ಥೆಯ ಉಸ್ತುವಾರಿ ವಹಿಸಲಿದ್ದಾರೆ.

ವಿಮಾನ ನಿಲ್ದಾಣ ರಸ್ತೆಯಲ್ಲಿ ಮಾತ್ರ ಸಂಚಾರ ವ್ಯತ್ಯಯ?

ನಗರದಿಂದ ವಿಮಾನ ನಿಲ್ದಾಣವರೆಗಿನ ರಸ್ತೆಯಲ್ಲಿ ಸಂಜೆ ವೇಳೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಗಳಿರುವುದರಿಂದ ವಿಮಾನ ನಿಲ್ದಾಣಕ್ಕೆ ತೆರಳುವವರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹೊರಡುವಂತೆ ಸೂಚಿಸಲಾಗಿದೆ.

ಸಂಚಾರ ಬದಲಾವಣೆ ಇರುವುದಿಲ್ಲ : ಆದರೆ “ಝೀರೋ ಟ್ರಾಫಿಕ್‌’ ಇರುತ್ತದೆ

ರಾಷ್ಟ್ರಪತಿಯವರು ಗುರುವಾರ ಸಂಜೆ ವೇಳೆ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್ ಗೆ ಆಗಮಿಸುವ ಕೆಲವು ನಿಮಿಷಗಳ ಮೊದಲು ಆ ರಸ್ತೆಯಲ್ಲಿ ಸಾರ್ವಜನಿಕ ವಾಹನ ಸಂಚಾರ ನಿರ್ಬಂಧಿಸಿ “ಝೀರೋ ಟ್ರಾಫಿಕ್‌’ ವ್ಯವಸ್ಥೆ ಮಾಡಲಾಗುತ್ತದೆ. ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಗರಿಷ್ಠ ಎಚ್ಚರಿಕೆ ವಹಿಸಲಾಗುವುದು. ಸಂಚಾರ ಮಾರ್ಪಾಡು ಮಾಡುವುದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.