ಉಡುಪಿ: ಜಿಲ್ಲೆಯ ಕೋಟ ಸಮೀಪದ ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ರುಮನೆಬೆಟ್ಟು ಪ್ರದೇಶದಲ್ಲಿ ಹಂದಿ ದಾಳಿಯಿಂದ ಓರ್ವ ಮಹಿಳೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮಹಿಳೆ ಕಮಲ ದೇವಾಡಿಗ (65) ಎಂದು ಗುರುತಿಸಲಾಗಿದ್ದು ಕಳೆದ ಒಂದು ವಾರದ ಹಿಂದೆ ಈ ಘಟನೆ ನಡೆಯಿತ್ತೆನ್ನಲಾಗಿದ್ದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.
ಘಟನೆ ವಿವರ:
ವಡ್ಡರ್ಸೆ ಗ್ರಾಮದ ಕುದ್ರುಮನೆಬೆಟ್ಟು ಪ್ರದೇಶದ ಭತ್ತದ ಗದ್ದೆ ವೀಕ್ಷಿಸಲು ತೆರಳುವ ಸಂದರ್ಭದಲ್ಲಿ ಕಾಡು ಹಂದಿ ಹಿಂದಿನಿಂದ ದಾಳಿಗೈದ ಪರಿಣಾಮ ದೇಹದ ಹೆಚ್ಚಿನ ಭಾಗಗಳ ಮೂಳೆ ಮೂರಿತಕ್ಕೊಳಗಾಗಿದ್ದು ಮಹಿಳೆಯನ್ನು ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹಂದಿ ಉಪಟಳ ಈ ಭಾಗದಲ್ಲಿ ಅತಿಯಾಗಿ ಕಾಣಿಸಿಕೊಂಡಿದ್ದು ಇಲ್ಲಿನ ಬೆಳೆಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟು ಮಾಡುತ್ತಿದೆ, ಈ ಬಗ್ಗೆ ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ ನೀಡಿ ಇಲಾಖೆಯನ್ನು ಎಚ್ಚರಿಸಿದರೂ ಅದರ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ ಈ ರೀತಿಯ ಸನ್ನಿವೇಶಗಳು ಸೃಷ್ಠಿಯಾಗಿವೆ ಎಂಬ ಮಾತುಗಳು ಕೇಳಿಬಂದಿವೆ. ಕೃಷಿಗೆ ಕಂಟಕವಾಗಿದ್ದಲ್ಲದೆ ಮನುಷ್ಯನ ಪ್ರಾಣಕ್ಕೂ ಕುತ್ತಾಗಿ ಕಂಡಿದೆ. ಇಷ್ಟಾಗಿಯೂ ಈ ಬಗ್ಗೆ ಸ್ಥಳೀಯಾಡಳಿತ, ಸಂಬಂಧಪಟ್ಟ ಇಲಾಖೆ ನಿರಾಸಕ್ತಿ ವಹಿಸಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿವೆ.
ಹಂದಿ ಉಪಟಳದ ಬಗ್ಗೆ ಸಾರ್ವಜನಿಕರು ಸ್ಥಳೀಯಾಡಳಿತಕ್ಕೆ ಎಚ್ಚರಿಸಿದರೂ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದ ಸ್ಥಳೀಯಾಡಳಿತದ ವಿರುದ್ಧ ಅಲ್ಲಿನ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ, ಶೀಘ್ರದಲ್ಲಿ ಪರಿಹಾರ ಒದಗಿಸದಿದ್ದರೆ ಹೋರಾಟದ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
Comments are closed.