ಬೆಂಗಳೂರು: ಐಟಿ ದಾಳಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಪ್ತ ಎ. ಉಮೇಶ್ ಅವರ ಸೇವೆಯನ್ನು ಹಿಂಪಡೆಯಲಾಗಿದೆ.

ನಿನ್ನೆ ಉಮೇಶ್ ಅವರ ಬೆಂಗಳೂರಿನ ನಿವಾಸದ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಮಧ್ಯಾಹ್ನ ಮೈಸೂರಿನಲ್ಲಿ ದಸರಾ ಹಬ್ಬದ ಉದ್ಘಾಟನೆ ಕಾರ್ಯಕ್ರಮದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಿ ಆಪ್ತ ಸಹಾಯಕನ ಹುದ್ದೆ ನೇಮಕ ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದಾರೆನ್ನಲಾಗಿದೆ.
ಬಿಎಂಟಿಸಿಯಲ್ಲಿ ಚಾಲಕ ಕಂ ನಿರ್ವಾಹಕ..
ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದವರಾದ ಎ ಉಮೇಶ್ 90ರ ದಶಕದಲ್ಲಿ ಬಿಎಂಟಿಸಿಯಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸಕ್ಕೆ ಸೇರಿದ್ದರು. ನಂತರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಂಬಸ್ಥರಿಗೆ ಆಪ್ತವಾಗಿ ಅವರಿಗೆ ಹತ್ತಿರವಾಗತೊಡಗಿದರು. ಬಿ ಎಸ್ ಯಡಿಯೂರಪ್ಪನವರು ವಿರೋಧ ಪಕ್ಷದಲ್ಲಿದ್ದಾಗಲೂ ಅವರ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ಅವರ ಮಗ ಬಿ ವೈ ರಾಘವೇಂದ್ರದ ಆಪ್ತ ಸಹಾಯಕನಾಗಿಯೂ ಕೆಲಸ ಮಾಡುತ್ತಿದ್ದರು. ರಾಘವೇಂದ್ರ ಬೆಂಗಳೂರಿಗೆ ಬಂದಾಗಲೆಲ್ಲ ಅವರ ಕೆಲಸದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
Comments are closed.