ಕರಾವಳಿ

ಉಪ್ಪಿನಂಗಡಿಯಲ್ಲಿ ಬೈಕ್‌ಗೆ ಟೆಂಪೋ ಢಿಕ್ಕಿ : ಬೈಕ್‌ ಸವಾರ ಯುವಕ ದಾರುಣ ಸಾವು

Pinterest LinkedIn Tumblr

ಉಪ್ಪಿನಂಗಡಿ: ಟೆಂಪೋವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಸಹ ಸವಾರ ಗಾಯಗೊಂಡ ಘಟನೆ ಅ.19ರ ಮಂಗಳವಾರ ಉಪ್ಪಿನಂಗಡಿಯ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.

ಮೃತ ದ್ವಿಚಕ್ರ ಸವಾರನನ್ನು ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ ಸಚಿನ್‌ (29) ಎಂದು ಗುರುತಿಸಲಾಗಿದೆ. ಈತನೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ ಅಂಕಿತ್‌‌‌‌ ಗಾಯಗೊಂಡಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅತಿ ವೇಗದಿಂದ ಬರುತ್ತಿದ್ದ ಮೀನು ಸಾಗಾಟದ ಟೆಂಪೋ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಬಂದಿದ್ದು, ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸಚಿನ್‌‌ ತಲೆಯ ಮೇಲೆ ಟೆಂಪೋದ ಚಕ್ರಗಳು ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.