ಉಡುಪಿ: ಲಾರಿಯೊಂದರಲ್ಲಿ ಕೋಣ, ಎತ್ತು, ಎಮ್ಮೆಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಬಳಿ ಲಾರಿ ತಡೆದು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಹುಬ್ಬಳ್ಳಿಯಿಂದ ಕೇರಳಕ್ಕೆ ಜಾನುವಾರು ಸಾಗಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕೇರಳ ಮೂಲದ ಲಾರಿ ಕ್ಲಿನರ್ ಪೊಲೀಸ್ ವಶದಲ್ಲಿದ್ದಾರೆ.
ಲಾರಿಯಲ್ಲಿ ಹಿಂಸಾತ್ಮಕ ವಾಗಿ ತುಂಬಿದ್ದರಿಂದ ಕೆಲವೊಂದು ಜಾನುವಾರುಗಳ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.
Comments are closed.