ಬೆಂಗಳೂರು: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಸ್ಯಾಂಡಲ್ ವುಡ್ ನಟ, ಫವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಿತು.

ಅಂತಿಮಯಾತ್ರೆಗೂ ಮುನ್ನ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನೀತ್ ಹಣೆಗೆ ಮುತ್ತಿಟ್ಟು ಕಂಬನಿ ಮಿಡಿದ ದೃಶ್ಯ ನಿಜಕ್ಕೂ ಎಲ್ಲರ ಮನಕಲುಕುವಂತಿತ್ತು.
ಇಂದು ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಸಚಿವರು, ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು, ಚಿತ್ರರಂಗದ ಗಣ್ಯರು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.