ಕರಾವಳಿ

ಕ್ರಿಮಿನಲ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿ ಬಂಧನ

Pinterest LinkedIn Tumblr

ಮಂಗಳೂರು: ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಕೊನೆಗೂ ಆತನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್(46) ಬಂಧಿತ ಆರೋಪಿಯಾಗಿದ್ದಾನೆ. ಈತ ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನ ಬಳಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾಧ್ಯತೆಗಳು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.

ಈ ಹಿನ್ನೆಲೆಯಲ್ಲಿ ಆತ ಮನೆಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಬಂಧಿಸಲಾಗಿದೆ.

 

 

 

Comments are closed.