ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದ ಬಗ್ಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಹೃದಯಾಘಾತದಿಂದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮೃತಪಟ್ಟಿದ್ದರು. ಈ ವೇಳೆ ಮದ್ಯ ನಿಷೇಧ ಮಾಡಿ ಆದೇಶಿಸಿದ್ದು ಆರೋಪಿ ಅಸಭ್ಯವಾಗಿ ಬರೆದು ಮದ್ಯ ಬಾಟಲಿ ಫೋಟೋ ಜೊತೆ ಶೇರ್ ಮಾಡಿದ್ದ. ಇದು ಅಪ್ಪು ಅಭಿಮಾನಿಗಳ ಸಹಿತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿತ್ತು. ಸುದೀಪ್ ಪುತ್ರಿ ಸಾನ್ವಿ ಕೂಡ ಇದನ್ನು ಖಂಡಿಸಿ ಕಾನೂನು ಕ್ರಮಕ್ಕೆ ಆಗ್ರಹಿದ್ದರು.
Comments are closed.