ಕರ್ನಾಟಕ

ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು

Pinterest LinkedIn Tumblr

ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ 79,515 ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 921 ಮತಗಳನ್ನು ಪಡೆದಿದ್ದಾರೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು, ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾರೀ ಪ್ರಚಾರ ನಡೆಸಿದ್ದರು. ಈ ಫಲಿತಾಂಶವು ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

Comments are closed.