ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಪರಿಚಯವಾದ ಯುವಕನೊಬ್ಬ ಆಕೆಗೆ ಹತ್ತಿರವಾಗಿ ನಗ್ನಚಿತ್ರವನ್ನು ಸೆರೆಹಿಡಿದು ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಆಗ್ಗಾಗೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನೌಫಲ್ ಎಂಬಾತನನ್ನು ಬಂಧಿಸಿದ್ದಾರೆ.

ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿರುವ ನೆಲ್ಯಾಯಾಡಿಯ ಹೊಸಮಜಲು ನಿವಾಸಿ ನೌಫಲ್ ಎಂಬಾತ 2018ರಲ್ಲಿ ಇಲ್ಲಿನ ಹಳ್ಳಿಯೊಂದರ ಶಾಲೆಗೆ ಹೋಗುತ್ತಿದ್ದ ಬಾಲಕಿಯ ಮೊಬೈಲ್ ನಂಬರ್ ತೆಗೆದುಕೊಂಡು ಬಳಿಕ ಆಕೆಯ ಪರಿಚಯ ಮಾಡಿಕೊಂಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯನ್ನು ಭೇಟಿ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಆತ, ಈ ಆಧಾರದ ಮೇಲೆ ತನ್ನ ಆಸೆಗೆ ಮಣಿಯುವಂತೆ ಬಾಲಕಿಗೆ ಬೆದರಿಕೆ ಹಾಕಿದ್ದ. ಈ ರೀತಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿಈ ಬಗ್ಗೆ ತನ್ನ ತಂದೆ ತಾಯಿಗೆ ತಿಳಿಸಿದ್ದು, ಇದಾದ ಬಳಿಕ ಆಕೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಇನ್ನು ಆರೋಪಿಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Comments are closed.