ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ

Pinterest LinkedIn Tumblr

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪುರಸ್ಕಾರ ದೊರೆತಿದ್ದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಅವರನ್ನು ಇಂದು (ನ.9) ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ದೆಹಲಿಯ ರಾಷ್ಟ್ರಪತಿ ಭವನದ‌ಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು.

ಇನ್ನು ಮಂಗಳೂರಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.