ಕರಾವಳಿ

ಲೈಂಗಿಕ ಕಿರುಕುಳ ಪ್ರಕರಣ; ವಕೀಲ ರಾಜೇಶ್ ಭಟ್ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ

Pinterest LinkedIn Tumblr

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಪತ್ತೆಗಾಗಿ ಮಂಗಳೂರು ಪೊಲೀಸರು ದೇಶಾದ್ಯಂತ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ.

ದೇಶದ ಎಲ್ಲ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಪೊಲೀಸ್ ಠಾಣೆಗಳಿಗೆ ಲುಕ್‌ಔಟ್ ನೋಟಿಸ್ ನೀಡಲಾಗುವುದು. ಅಲ್ಲದೆ ಈತ ಕಂಡುಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತಿಳಿಸುಂತೆ ಹೇಳಿ ನೋಟಿಸನ್ನು ಬಸ್ ನಿಲ್ದಾಣ, ಹೊಟೇಲ್, ಪೊಲೀಸ್ ಠಾಣೆ ಆಸುಪಾಸಿನಲ್ಲಿ ಅಂಟಿಸುವ ಪ್ರಕ್ರಿಯೆಗೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನಿರ್ದೇಶನ ನೀಡಿದ್ದಾರೆ.

ಇನ್ನು ಇದಲ್ಲದೆ ವಕೀಲ ರಾಜೇಶ್‌ ಭಟ್ ಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಕೂಡಾ ಸೀಜ್ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ತನ್ನ ಪ್ರಭಾವವನ್ನು ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ, ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಅ. 18ರಂದು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಕೀಲ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದಾ‌ನೆ.

Comments are closed.