ರಾಜಸ್ಥಾನ: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ.

ಟ್ಯಾಂಕರ್ ಹಾಗೂ ಬಸ್ ಮಧ್ಯೆ ಅಪಘಾತವಾಗಿದ್ದು ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ 12 ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್ ಮತ್ತು ಬಸ್ ಡಿಕ್ಕಿಯಾದ ನಂತರ ಬಸ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಕೆಲವರು ಕಿಟಕಿ ಗ್ಲಾಸನ್ನು ಒಡೆದು ಹೊರಗೆ ಬಂದು ಬಚಾವ್ ಆಗಿದ್ದಾರೆಂದು ಸ್ಥಳೀಯರು ಹೇಳಿದ್ದಾರೆ.
ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಬಾರ್ಮರ್ ಜಿಲ್ಲಾಧಿಕಾರಿಯವರ ಜೊತೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Comments are closed.