ಕರ್ನಾಟಕ

ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆ: ಎಚ್.ಡಿ ಕುಮಾರಸ್ವಾಮಿ

Pinterest LinkedIn Tumblr

ಬೆಂಗಳೂರು: ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಅವರು ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಇದೇ ವೇಳೆ ಮತ್ತೊಂದು ಬಾಂಬ್ ಸಿಡಿಸಿದರು.

ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು ಯಾರು..? ಜಾಮೀನು ಕೊಟ್ಟವರು ಯಾರು? ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು.

Comments are closed.