ರಾಷ್ಟ್ರೀಯ

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಹೊತ್ತು ಸಾಗಿದ ಚೆನ್ನೈ ಮಹಿಳಾ ಪೊಲೀಸ್ ಅಧಿಕಾರಿ: ನೆಟ್ಟಿಗರಿಂದ ಬಾರೀ ಮೆಚ್ಚುಗೆ..!

Pinterest LinkedIn Tumblr

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಪೊಲೀಸರು ಜೀವದ ಹಂಗು ತೊರೆದು ಜನರ ಪ್ರಾಣ ಉಳಿಸಿದ ವಿಡಿಯೋ ಇದೀಗಾ ವೈರಲ್ ಆಗಿದೆ.

ಸಾಮಾಜಿ ಜಾಲತಾಣದಲ್ಲಿ ಒಂದು ವಿಡಿಯೋ ಹರಿದಾಡುತ್ತಿದ್ದು, ಮಹಿಳಾ ಇನ್ಸ್‌ಪೆಕ್ಟರ್ ಒಬ್ಬರು ಪ್ರಜ್ಞೆ ತಪ್ಪಿದ ವ್ಯಕ್ತಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಸಾಗಿದ್ದಾರೆ. ಬಳಿಕ ಆಟೋ ರಿಕ್ಷಾದಲ್ಲಿ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಲಾಗಿದೆ. ಮಳೆ ಪೀಡಿತ ಚೆನ್ನೈನ ಟಿಪಿ ಚತ್ರಂ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೂರಿಲ್ಲದೇ ನೆಂದು ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಹೊತ್ತು ಸಾಗಿದ್ದಾರೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರ ಭುಜಗಳ ಶಕ್ತಿ ಯಾರಿಗೂ ಇಲ್ಲ. ಭೀಕರ ಮಳೆಯಲ್ಲಿ ಪ್ರಜ್ಞೆ ತಪ್ಪಿದ ವ್ಯಕ್ತಿಯನ್ನು ಆಟೊದಲ್ಲಿ ಹತ್ತಿರದ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದು ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

 

 

 

Comments are closed.