ಕರಾವಳಿ

ಉಡುಪಿಯ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿಯರೊಂದಿಗೆ ವಿಕೃತ ವರ್ತನೆ; ಬಸ್ ನಿರ್ವಾಹಕನ ಬಂಧನ

Pinterest LinkedIn Tumblr

ಉಡುಪಿ: ಜಿಲ್ಲೆಯ ಸಂತೆಕಟ್ಟೆಯ ನರ್ಸಿಂಗ್ ಕಾಲೇಜಿನ ಬಳಿ ವಿದ್ಯಾರ್ಥಿನಿಯರನ್ನು ಕಂಡೊಡನೆ ವಿಕೃತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಖಾಸಗಿ ಬಸ್ ನಿರ್ವಾಹಕನನ್ನು ಉಡುಪಿ ನಗರ ಪೊಲೀಸರು ನ.11ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಕ್ಕಿಕಟ್ಟೆ ನಿವಾಸಿ ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಎಂದು ಗುರುತಿಸಲಾಗಿದೆ. ಈತ ಕಳೆದ ಹಲವಾರು ದಿನಗಳಿಂದ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ವಿಕೃತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಈತನ ವಿರುದ್ದ ಕಾಲೇಜು ಹಾಸ್ಟೆಲ್ ಆಡಳಿತಾಧಿಕಾರಿಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಲವಾರು ದಿನಗಳಿಂದ ವಿಕೃತವಾಗಿ ವರ್ತಿಸುತ್ತಿದ್ದ. ಈತನ ಮತ್ತೆ ಹಳೆ ಚಾಳಿ ಮುಂದುವರಿಸಿದ್ದ ಹಿನ್ನಲೆಯಲ್ಲಿ ನ.6ರಂದು ರಾತ್ರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈತನನ್ನು ಥಳಿಸಿದ್ದರು.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Comments are closed.