ಉಡುಪಿ: ಉಡುಪಿ ಒಏಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಸಂದ ‘ಪದ್ಮವಿಭೂಷಣ ಪ್ರಶಸ್ತಿ’ ಸ್ವಾಗತ ಸಮಾರಂಭದ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಪ್ರಮೋದ್ ಮದ್ವರಾಜ್ ಗುಣಗಾನ ಮಾಡಿದ್ದಾರೆ.

‘ಈ ಹಿಂದೆ ಅರ್ಜಿ ಹಾಕಿದವರಿಗಷ್ಟೆ ಪ್ರಶಸ್ತಿಗಳು ಸಿಗುತ್ತಿತ್ತು. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪ್ರಶಸ್ತಿಗಳು ಅರ್ಹರನ್ನು ಹುಡುಕಿಕೊಂಡು ಬರುತ್ತಿದೆ. ಗುಣಕ್ಕೆ ಮತ್ಸರ ಇಲ್ಲ . ನಾನು ಬೇರೆ ಪಕ್ಷದಲ್ಲಿದ್ದರೂ ಕೂಡ ಯಾವುದೇ ಪಕ್ಷದವರು ಉತ್ತಮ ಕಾರ್ಯಗಳನ್ನು ಮಾಡಿದಾಗ ಶ್ಲಾಘಿಸಬೇಕಿರುವುದು ಕರ್ತವ್ಯ ಎಂದು ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.
ಪ್ರಮೋದ್ ಮಧ್ವರಾಜ್ ಮಾತಿಗೆ ಸಭಿಕರು ಕರತಾಡನದ ಮೂಲಕ ಮೆಚ್ಚುಗೆ ಸೂಚಿಸಿದರು.
Comments are closed.