ಕುಂದಾಪುರ: ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪ್ರತಿವರ್ಷದ ಕಾರ್ತಿಕ ಮಾಸದಲ್ಲಿ ಜರಗುವ ಶ್ರೀದೇವರ ವಿರಾಟರೂಪ ದರ್ಶನ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.

ಬೆಳಿಗ್ಗೆ ಭಜನೆ, ದೀಪಾರಾಧನೆ, ವಿರಾಟರೂಪ ದರ್ಶನ, ಕಾಕಡ ಆರತಿ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಜಕರು ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
Comments are closed.