ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರೇ ಅಭ್ಯರ್ಥಿ ಎಂಬುದು ಪಕ್ಕಾ ಆಗಿದ್ದು ಪಕ್ಷದಿಂದ ಟಿಕೆಟ್ ಪಡೆದುಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಯವರು ಪಡೆದುಕೊಳ್ಳಲಿದ್ದಾರೆ. ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದು ಅಲ್ಲದೆ, ಬೊಮ್ಮಾಯಿ ಸಂಪುಟದಲ್ಲೂ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.
ಇನ್ನೊಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ಆಗದಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮುಂದಿನ ಆಯ್ಕೆಯೂ ಕೂಡ ಇದಕ್ಕೆ ಹೊಂದಿಕೊಂಡಿರಲಿದೆ ಎಂದು ಹೇಳಲಾಗುತ್ತಿದೆ.
Comments are closed.