ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಗಾಗಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹಾಗೂ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.
ಹಿರಿಯರ ಆಶೀರ್ವಾದ ಪಡೆದ ಕೋಟ…
ಸಚಿವ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಕೆಗೂ ಮೊದಲು ಉಡುಪಿ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು.
Comments are closed.